

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಜಾವಳಿಯಲ್ಲಿ ಕಂದಾಯ ನಿರೀಕ್ಷಕ ಮಹೇಶ್ ಎಂಬುವವರು 8 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ತಲಗೂರಿನ ಫಾರುಖ್ ಎಂಬುವವರು ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಇನ್ಸ್ ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ಮನೆಯ ಖಾತಾ ಮಾಡಿಕೊಡಲು ಈ ಲಂಚದ ಬೇಡಿಕೆ ಇಡಲಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ.