ಕಂದಾಯ ಸಚಿವರ ಜಿಲ್ಲಾ ಪ್ರವಾಸ ನಾಳೆ

r-ashok
Published on

ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ಅ.19ರಂದು ಕಂದಾಯ ಸಚಿವ ಆರ್.ಅಶೋಕ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 8ಕ್ಕೆ ಬೆಂಗಳೂರು ಎಚ್‌ಎಎಲ್‌ನಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 9.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 9.45ಕ್ಕೆ ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿ ಜಿಲ್ಲೆಯ ಅತಿವೃಷ್ಟಿಯ ಮಾಹಿತಿ ಪಡೆಯಲಿದ್ದಾರೆ.

10.30ಕ್ಕೆ ನಗರದ ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಸಕರ ಜತೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ರಸ್ತೆ ಮಾರ್ಗವಾಗಿ ಹುಕ್ಕೇರಿ ತಾಲೂಕಿನ ಹತ್ತರಗಿ, ಜೀನರಾಳ, ಎಲಿಮುನ್ನೊಳ್ಳಿ ಗ್ರಾಮದಲ್ಲಿ ಬೆಳೆಹಾನಿ, ಹುಕ್ಕೇರಿ ಪಟ್ಟಣದಲ್ಲಿ ಬಸ್ ನಿಲ್ದಾಣ, ಮನೆ ಹಾನಿ ಪರಿಶೀಲಿಸಲಿದ್ದಾರೆ.

ಮಧ್ಯಾಹ್ನ 3.10ಕ್ಕೆ ಚಿಕ್ಕೋಡಿ ತಾಲೂಕಿನ ಕಲ್ಲೋಳಿ ಬ್ಯಾರೇಜ್, ದತ್ತ ಮಂದಿರ ವೀಕ್ಷಣೆ, ಮಧ್ಯಾಹ್ನ 3.30ಕ್ಕೆ ಯಡೂರ, ಯಡೂರವಾಡಿ, ಇಂಗಳಿ ಗ್ರಾಮದಲ್ಲಿ ಬೆಳೆಹಾನಿ ವೀಕ್ಷಣೆ ಮಾಡಲಿದ್ದಾರೆ. ಸಂಜೆ 6.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net