

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಸಾರ್ವಜನಿಕರಿಗೆ ದಾಖಲೆಗಳು ಆನ್ಲೈನ್ನಲ್ಲಿ ದೊರಕುವಂತೆ ಮಾಡುವಲ್ಲಿ ಕಂದಾಯ ದಾಖಲೆಗಳ ಗಣಕೀಕರಣ ಉತ್ತಮ ಯೋಜನೆಯಾಗಿದೆ. ಅಧಿಕಾರಿಗಳು ಇದನ್ನು ಧನಾತ್ಮಕವಾಗಿ ಕೈಗೊಳ್ಳಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಲಹೆ ನೀಡಿದರು.
ಕಾಪು ತಾಲೂಕು ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಮಾತನಾಡಿ, ಉತ್ತಮ ರೀತಿಯಲ್ಲಿ ಗುಣಾತ್ಮಕ ವಿಧದಲ್ಲಿ ಡಿಜಿಟಲೀಕರಣ ಆಗುವಂತೆ ಕ್ರಮವಹಿಸಬೇಕು ಎಂದರು.
ತಹಸೀಲ್ದಾರ್ ಪ್ರತಿಭಾ ಆರ್. ಮಾತನಾಡಿ, ಕಾಪು ತಾಲೂಕು ಕಂದಾಯ ಇಲಾಖೆಗಳ ಗಣಕೀಕರಣ ಕಾರ್ಯ ಗುಣಾತ್ಮಕ ರೀತಿಯಲ್ಲಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಾಟಾ ಎಂಟ್ರಿ ಆಪರೇಟರ್ಗಳಿಗೆ ತರಬೇತಿ ನೀಡಲಾಗಿದೆ. ಹಲವು ಹಂತಗಳಲ್ಲಿ ಪರಿಶೀಲಿಸಿ ವೆಬ್ಸೈಟ್ಗೆ ಅಪ್ಲೋಡ್ ಮಾಡಲಾಗುತ್ತದೆ. ತಾಲೂಕಿನ ಕಂದಾಯ ದಾಖಲೆ ಸುರಕ್ಷತೆಗಾಗಿ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಶಿರಸ್ತೇದಾರ್ಗಳಾದ ರವಿಕಿರಣ್, ದೇವಕಿ, ಸತೀಶ್ ಉಪಸ್ಥಿತರಿದ್ದರು.