

ಇಂಡಿ: ಉಪ ವಿಭಾಗದ ನೂತನ ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸದ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ವಿನಯ ಪಾಟೀಲ ಅವರು ಅನುರಾಧಾ ವಸದ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಅನುರಾಧಾ ಅವರು ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಇಂಜಿನಿಯರಿಂಗ್ ಪದವಿಯನ್ನು ವಿಜಯಪುರದ ಬಿ.ಎಲ್.ಡಿ. ಈ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿತಿದ್ದಾರೆ.
ಹುಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾದೀನ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಕಾನೂನು ವಿ ವಿ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.