‘ಗೃಹಲಕ್ಷ್ಮೀ’ ಯೋಜನೆ ಜಾರಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ

IMG-20230820-WA0026
Published on

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ನಗರದ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ‘ಗೃಹಲಕ್ಷ್ಮೀ’ ಯೋಜನೆ ಜಾರಿ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದರು.

ವೇದಿಕೆ ನಿರ್ಮಾಣ, ಶೌಚಗೃಹ, ಬಸ್ ವ್ಯವಸ್ಥೆ, ಕುಡಿಯುವ ನೀರು ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದರು. ಸಿದ್ಧತೆ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಜತೆಗೆ ಕೆಲ ಸೂಚನೆಗಳನ್ನು ನೀಡಿದರು.

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ‘ಗೃಹಲಕ್ಷ್ಮೀ’ ಯೋಜನೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆ.30ರಂದು ಚಾಲನೆ ನೀಡಲಾಗುತ್ತಿದೆ.

ಶಾಸಕರಾದ ಕೆ.ಹರೀಶ್‌ಗೌಡ, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪ್ರಕಾಶ್, ನಿರ್ದೇಶಕಿ ಅರ್ಚನಾ, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಜಿ.ಪಂ. ಸಿಇಒ ಕೆ.ಎಂ.ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net