ಸೂಪರ್ ಚೆಕ್ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ

Published on

ಚಿತ್ರದುರ್ಗ: ತಾಲೂಕಿನ ಭೀಮಸಮುದ್ರ ಸಮೀಪದ ವಿ.ವಿ. ಪಾಳ್ಯ ಗ್ರಾಮದ ಮನೆ, ಮನೆಗಳಿಗೆ ಭೇಟಿ ನೀಡುವ ಮೂಲಕ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಸೂಪರ್ ಚೆಕ್ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಜಿ.ಆರ್.ಜೆ. ದಿವ್ಯಾಪ್ರಭು ಪರಿಶೀಲನೆ ನಡೆಸಿದರು.

ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕಲು ಅಥವಾ ಆಕ್ಷೇಪಣೆ, ತಿದ್ದುಪಡಿ, ವರ್ಗಾವಣೆ, ಎಪಿಕ್ ಕಾರ್ಡ್ ಸೇರಿ ಇತರೆ ಬದಲಾವಣೆಗಾಗಿ ಅರ್ಜಿಗಳನ್ನು ಸಾರ್ವಜನಿಕರಿಂದ ಆಯಾ ಮತಗಟ್ಟೆ ಅಧಿಕಾರಿಗಳು ಸ್ವೀಕರಿಸಿದ್ದಾರೆ. ಸ್ವೀಕೃತ ಅರ್ಜಿಯನ್ನು ಆಯಾ ತಾಲೂಕಿನ ತಹಸೀಲ್ದಾರರು, ಉಪವಿಭಾಗಾಧಿಕಾರಿ ಪರಿಶೀಲಿಸಿ, ದಾಖಲಿಸಿದ್ದಾರೆ ಎಂದು ತಿಳಿಸಿದರು.

ಈ ಎಲ್ಲ ಪ್ರಕ್ರಿಯೆ ನಿಯಮಾನುಸಾರ ನಡೆದಿರುವ ಕುರಿತು ಚುನಾವಣಾ ಆಯೋಗದ ನಿರ್ದೇಶನದಂತೆ ಭೇಟಿ ನೀಡಿ, ಬಿಎಲ್ಒಗಳಿಂದ ಮಾಹಿತಿ ಪಡೆದರು.

ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಿರುವವರ ಎಪಿಕ್ ಕಾರ್ಡ್ ಆಯಾ ಮತದಾರರ ಮನೆ ವಿಳಾಸಕ್ಕೆ ಅಂಚೆ ಮೂಲಕ ಉಚಿತವಾಗಿ ತಲುಪಲಿದೆ. ಇದಕ್ಕಾಗಿ ಯಾರೂ ಹಣ ನೀಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಎಪಿಕ್ ಕಾರ್ಡ್ ಕಳೆದು ಹೋಗಿದ್ದಲ್ಲಿ, ಬದಲಿ ಕಾರ್ಡ್ ಪಡೆಯಲು ಸಂಬಂಧಿಸಿದ ಬಿಎಲ್‌ಒ, ತಹಸೀಲ್ದಾರ್ ಅಥವಾ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ, ಉಚಿತವಾಗಿ ಪಡೆಯಬಹುದು. ಯಾವುದೇ ಗೊಂದಲವಿದ್ದಲ್ಲಿ ಮತದಾರರ ಸಹಾಯವಾಣಿ 1950 ಕರೆಮಾಡಿ, ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು.

ತಹಸೀಲ್ದಾರ್ ಸತ್ಯನಾರಾಯಣ, ಬಿಎಲ್ಒಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net