ಸ್ಥಿರಾಸ್ತಿಗಳ ಮಾರುಕಟ್ಟೆ ಬೆಲೆ ಪರಿಷ್ಕರಣೆ

Revision of market price of immovable properties
Published on

ಮುಧೋಳ: ತಾಲೂಕು ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮಾರ್ಗಸೂಚಿ ಮಾರುಕಟ್ಟೆ ಬೆಲೆಗಳನ್ನು ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪ ಸಮಿತಿ ಅಧ್ಯಕ್ಷರು ಹಾಗೂ ತಹಸೀಲ್ದಾರ್‌ರ ಸಮ್ಮುಖದಲ್ಲಿ ಆ.7ರಂದು ನಡೆದ ಸಭೆಯಲ್ಲಿ ಪರಿಷ್ಕರಿಸಲಾಗಿದೆ.

ಪರಿಷ್ಕೃತ ದರಗಳ ಕರಡು ಪ್ರತಿಯನ್ನು ಸಾರ್ವಜನಿಕರ ತಿಳಿವಳಿಕೆಗಾಗಿ ನಗರದ ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿ, ತಹಸೀಲ್ದಾರ್ ಕಾರ್ಯಾಲಯ, ನಗರಸಭೆ, ಮಹಾಲಿಂಗಪುರ ಪುರಸಭೆ, ಬೆಳಗಲಿ ಪಟ್ಟಣ ಪಂಚಾಯಿತಿ, ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಪ್ರಕಟಿಸಲಾಗಿದೆ.

ಉದ್ದೇಶಿತ ದರಗಳ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸೂಕ್ತ ದಾಖಲಾತಿಯೊಂದಿಗೆ ಲಿಖಿತವಾಗಿ 15 ದಿನಗಳೊಳಗೆ ಸದಸ್ಯ ಕಾರ್ಯದರ್ಶಿ, ಮಾರುಕಟ್ಟೆ ಮೌಲ್ಯ ನಿರ್ಧರಣಾ ಉಪಸಮಿತಿ ಹಾಗೂ ಹಿರಿಯ ಉಪನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು.

ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಹಿರಿಯ ಉಪ ನೋಂದಣಾಧಿಕಾರಿ ವಿಠ್ಠಲ ಮಾದರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net