

ಕಡಬ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ವತಿಯಿಂದ ನಮ್ಮೂರು ನಮ್ಮ ಕೆರೆ ಯೋಜನೆಯಡಿಯಲ್ಲಿ ಕುಟ್ರುಪ್ಪಾಡಿ ಗ್ರಾ.ಪಂ, ಕೆರೆ ಅಭಿವೃದ್ಧಿ ಸಮಿತಿ ಸಹಭಾಗಿತ್ವದಲ್ಲಿ ಪುನಶ್ಚೇತನಗೊಂಡಿರುವ ಕಡಬ ಹಳೇ ಸ್ಟೇಷನ್ ಬಳಿಯಿರುವ ಪೊಟ್ಟುಕೆರೆಗೆ ಬಾಗಿನ ಸಮರ್ಪಣೆ, ನಾಮಫಲಕ ಅನಾವರಣ, ಕೆರೆ ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನಡೆಯಿತು.
ತಾಪಂ ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ ಅಮೃತ್ ಸರೋವರ ಕೆರೆಗೆ ಬಾಗಿನ ಸಮರ್ಪಣೆ ಮಾಡಿದರು. ಕುಟ್ರುಪ್ಪಾಡಿ ಗ್ರಾಪಂ ಅಧ್ಯಕ್ಷೆ ಸುಮನಾ ಕೆರೆಯ ನಾಮಫಲಕ ಅನಾವರಣಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸೈಯದ್ ಮೀರಾಸಾಹೇಬ್ ಉದ್ಘಾಟಿಸಿದರು. ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಕೆರೆ ಜವಾಬ್ದಾರಿಯನ್ನು ಕುಟ್ರುಪ್ಪಾಡಿ ಗ್ರಾಪಂಗೆ ಹಸ್ತಾಂತರಿಸಿದರು.
ಕುಟ್ರುಪ್ಪಾಡಿ ಗ್ರಾಪಂ ಉಪಾಧ್ಯಕ್ಷೆ ಯಶೋದಾ, ಕೆರೆ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ ಮೈಲೇರಿ, ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು, ಕಡಬ ತಾಲೂಕು ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಸಂತೋಷ್ ಕೆ, ಕುಟ್ರುಪ್ಪಾಡಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷ ನಾಗಣ್ಣ ಗೌಡ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕಡಬ ವಲಯ ಒಕ್ಕೂಟಗಳ ಅಧ್ಯಕ್ಷ ರಮೇಶ್ ರೈ, ಕಡಬ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಶಾಂತ್ ಎನ್.ಎಸ್, ಕೃಷಿ ಮೇಲ್ವಿಚಾರಕ ಸೋಮೇಶ್, ಕಡಬ ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಎನ್. ಸ್ವಾಗತಿಸಿದರು. ಕುಟ್ರುಪ್ಪಾಡಿ ಪಿಡಿಇ ಆನಂದ ಎ. ವಂದಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ನಿರೂಪಿಸಿದರು.