ಸಾಂಪ್ರದಾಯಿಕ ಕುಲ ಕಸುಬುಗಳಿಗೆ ಮರುಜೀವ

kota (1)
Published on

ಕೋಟ: ನಶಿಸಿ ಹೋಗುತ್ತಿರುವ ಸಾಂಪ್ರದಾಯಿಕ ಕುಲ ಕಸುಬುಗಳಿಗೆ ಕೇಂದ್ರ ಸರ್ಕಾರ ಮರುಜೀವದ ಕಾಯಕಲ್ಪ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳವಾರ ಉಡುಪಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಫಲಾನುಭವಿಗಳಿಗೆ ಪಿಎಂ ವಿಶ್ವಕರ್ಮ ಯೋಜನೆಯ ಸೌಲಭ್ಯ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಫಲಾನುಭವಿಗಳಿಗೆ ಕಿಟ್ ವಿತರಿಸಿ, ವಿಕಸಿತ ಭಾರತಕ್ಕೆ ಈ ಯೋಜನೆ ಸಹಕಾರಿಯಾಗಿದೆ. ಮುಂದಿನ 2040ರೊಳಗೆ ಭಾರತ ನವ ಭಾರತವಾಗಿ ಮೂಡಿ ಬರಲಿದೆ ಎಂದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಕಿಟ್ ವಿತರಿಸಲಾಯಿತು. ಫಲಾನುಭವಿಗಳ ಪಟ್ಟಿಯನ್ನು ಹರೀಶ್ ಶೆಟ್ಟಿ ವಾಚಿಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಾಲಿಗ್ರಾಮ ಅಂಚೆ ಇಲಾಖಾಧಿಕಾರಿ ಶಂಕರ ಲಂಬಾಣಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಅನುಸೂಯ ಹೇರ್ಳೆ ಉಪಸ್ಥಿತರಿದ್ದರು. ಪ.ಪಂ. ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಸ್ವಾಗತಿಸಿದರು. ಸಿಬ್ಬಂದಿ ಸುಮಿತ್ರಾ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net