ಗಡಿಪಾರು ಶಿಕ್ಷೆ ಹಿಂಪಡೆಯಿರಿ

10 skpp 1
ಹಿಂದು ಮುಖಂಡರ ಗಡಿಪಾರು ಶಿಕ್ಷೆ ಹಿಂಪಡೆಯುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಉಪವಿಭಾಗಾಧಿಕಾರಿ ಡಾ.ಎಂ.ಕೆ.ಶ್ರುತಿ ಅವರಿಗೆ ಮನವಿ ಸಲ್ಲಿಸಿದರು. ಮಂಜುನಾಥ್, ಶಿವು, ಕೌಶಿಕ್ ಇತರರು ಇದ್ದರು.
Published on

ಸಕಲೇಶಪುರ: ಹಿಂದು ಮುಖಂಡರ ಗಡಿಪಾರು ಶಿಕ್ಷೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಉಪವಿಭಾಗಾಧಿಕಾರಿ ಡಾ.ಎಂ.ಕೆ.ಶ್ರುತಿ ಅವರಿಗೆ ಬುಧವಾರ ಹಿಂದುಪರ ಸಂಘಟನೆ ಕಾರ್ಯಕರ್ತರು ಮನವಿ ಮಾಡಿದರು.


ಹಿಂದು ಸಮಾಜ ಎಚ್ಚರಿಸುವ ಹಾಗೂ ಗೋವುಗಳ ಸಂರಕ್ಷಣೆಯ ಕೆಲಸ ಮಾಡುತ್ತಿರುವ ಹಿಂದು ಮುಖಂಡರಿಗೆೆ ರಾಜ್ಯ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಗಡಿಪಾರು ಶಿಕ್ಷೆ ವಿಧಿಸಿದೆ. ಆದರೆ ಜಿಲ್ಲೆಯಲ್ಲಿ ಸಾಕಷ್ಟು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೆಲವರು ಜನರು ನಿರಂತರವಾಗಿ ಸಮಾಜದ ಸಾಮರಸ್ಯ ಕದಡುವ ಕೆಲಸ ಮಾಡುತ್ತಿದ್ದರೂ ಅವರಿಗೆ ಗಡಿಪಾರಿನ ಶಿಕ್ಷೆ ವಿಧಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಕೂಡಲೇ ಹಿಂದು ಮುಖಂಡರ ವಿರುದ್ಧ ವಿಧಿಸಿರುವ ಗಡಿಪಾರು ಶಿಕ್ಷೆಯನ್ನು ಹಿಂಪಡೆಯಬೇಕು. ತಪ್ಪಿದಲ್ಲಿ ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಸರ್ಕಾರ ಎದುರಿಸ ಬೇಕಾಗುತ್ತದೆ ಎಂದು ಎಚ್ಚರಿಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ವಿಶ್ವ ಹಿಂದು ಪರಿಷತ್ ತಾಲೂಕು ಕಾರ್ಯದರ್ಶಿ ಮಂಜುನಾಥ್, ಶಿವು, ಕೌಶಿಕ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net