ಅರಸು ಕ್ರಾಂತಿಕಾರಿ ರಾಜಕಾರಣಿ

krantikari
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 109ನೇ ಜನ್ಮದಿನಾಚರಣೆಯನ್ನು ಶಾಸಕ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಕುಂದಾಪುರ
ಹಿಂದುಳಿದ ವರ್ಗದವರಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸುವುದರೊಂದಿಗೆ ಶಿಕ್ಷಣದತ್ತ ಕ್ರಾಂತಿಕಾರಕ ಹೆಜ್ಜೆ ಇಟ್ಟವರು ದಿ.ಮುಖ್ಯಮಂತ್ರಿ ದೇವರಾಜ ಅರಸು. ಉಡುಪಿ ಜಿಲ್ಲೆಗೆ ಅನ್ಯ ಜಿಲ್ಲೆಗಳಿಂದ ಹೆಚ್ಚಿನ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಇನ್ನಷ್ಟು ಹಾಸ್ಟೆಲ್‌ಗಳು ಅಗತ್ಯವಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಮಂಗಳವಾರ ಇಲ್ಲಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 109ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿ, ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ನನ್ನ ತಂದೆ ಎ.ಜಿ. ಕೊಡ್ಗಿ ಶಾಸಕರಾಗಿದ್ದರು. ಭೂರಹಿತರಿಗೆ ಉಳುವವನೇ ಹೊಲದೊಡೆಯ ಕಾನೂನಿನ ಮೂಲಕ ಜನಜೀವನ ಮಟ್ಟ ಸುಧಾರಿಸಲು ನೆರವಾಗಿದ್ದಾರೆ ಎಂದರು.
ಸಹಾಯಕ ಕಮಿಷನರ್ ಕೆ.ಮಹೇಶ್ಚಂದ್ರ, ತಹಸೀಲ್ದಾರ್ ಶೋಭಾಲಕ್ಷ್ಮೀ, ತಾ.ಪಂ. ಕಾರ್ಯ ನಿರ್ವಹಣಾಕಾರಿ ಶಶಿಧರ್ ಕೆ.ಜಿ, ಪುರಸಭೆ ಮುಖ್ಯಾಕಾರಿ ಆನಂದ ಜೆ. ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕ ಪ್ರಶಾಂತ ನೀಲಾವರ ದೇವರಾಜ ಅರಸು ಕುರಿತು ಮಾತನಾಡಿದರು. ಆಶಾಲತಾ ನಾಯಕ್ ಬಹುಮಾನಿತರ ಪಟ್ಟಿ ವಾಚಿಸಿದರು. ಶಶಿಕಲಾ ಸ್ವಾಗತಿಸಿದರು. ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net