ಪರಿಸರ ರಕ್ಷಣೆಗೆ ಬೂದು ನೀರು ನಿರ್ವಹಣೆ ಪೂರಕ

Oplus_0
ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ಶುಕ್ರವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಬೂದು ನೀರು ನಿರ್ವಹಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಪಂ ಅಧ್ಯಕ್ಷ ನವೀನ್‌ಕುಮಾರ್ ಇದ್ದರು.
Published on

ಯಳಂದೂರು: ಬೂದು ನೀರು ನಿರ್ವಹಣೆಗೆ ಸರ್ಕಾರ ಅನುದಾನವನ್ನು ನೀಡಿದೆ. ಪರಿಸರ ಸಂರಕ್ಷಣೆಯಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಗ್ರಾಪಂ ಅಧಿಕಾರಿಗಳು, ಜನಪ್ರತಿನಿಧಿಗಳು ಇದಕ್ಕೆ ಮಹತ್ವ ನೀಡಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.

ತಾಲೂಕಿನ ಅಂಬಳೆ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಬೂದು ನಿರ್ವಹಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಪ್ರತಿ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಸಂಗ್ರಹವಾಗುವ ಕಲುಷಿತ ನೀರು, ನದಿ, ಕಾಲುವೆಗಳನ್ನು ಸೇರುತ್ತದೆ. ಇದರಿಂದ ಶುದ್ಧ ನೀರು ಕಲುಷಿತಗೊಳ್ಳುತ್ತದೆ. ಇದನ್ನು ಮೂಲದಲ್ಲೇ ಸಂಸ್ಕರಿಸಿ, ಶುದ್ಧಗೊಳಿಸಿ ಇದನ್ನು ನೀರಿನ ಮೂಲಕ್ಕೆ ಬಿಡುವುದರಿಂದ ನೀರು ಕಲುಷಿತಗೊಳ್ಳುವುದನ್ನು ತಡೆಯಬಹುದು. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಬೂದು ನೀರು ನಿರ್ವಹಣೆ, ಚರಂಡಿ ಹಾಗೂ ಇನ್ ಲೈನ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ತಾಲೂಕಿನ 9 ಗ್ರಾಪಂಗಳಿಗೆ 2.10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಅಂಬಳೆ ಗ್ರಾಮದಲ್ಲಿ 7 ಕಡೆ 33 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, ಚಾಲನೆ ನೀಡಲಾಗಿದೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಆಸಕ್ತಿ ವಹಿಸಬೇಕು ಎಂದು ಮಾಹಿತಿ ನೀಡಿದರು.

25 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಕಂದಹಳ್ಳಿ ಮಹದೇಶ್ವರ ದೇಗುಲದಿಂದ ಅಂಬಳೆ ಮಾರ್ಗವಾಗಿ ಆಲೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿತ್ತು. ಈಗ ಈ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ. ಅಲ್ಲದೆ ಒಟ್ಟು 53.16 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿಗೆ ಕ್ರಮ ವಹಿಸಲಾಗಿದೆ. ಆದಷ್ಟು ಬೇಗ ಈ ಕಾಮಗಾರಿ ಆರಂಭಗೊಳ್ಳಲಿದ್ದು, ಗ್ರಾಮೀಣ ರಸ್ತೆಗಳಿಗೆ ಹೊಸ ಕಾಯಕಲ್ಪ ನೀಡಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷ ನವೀನ್‌ಕುಮಾರ್, ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಸದಸ್ಯ ಸಿದ್ದನಾಯಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್ ಇಒ ಉಮೇಶ್ ಮಾತನಾಡಿದರು. ಗ್ರಾಪಂ ಸದಸ್ಯರಾದ ಮಹದೇವಸ್ವಾಮಿ ಪಿಡಿಒ ಕಾವ್ಯಾ, ಕಾರ್ಯದರ್ಶಿ ಪುಟ್ಟರಾಜು ಜಿಪಂ ನೀರಾವರಿ ವಿಭಾಗದ ಎಇಇ ಚಂದ್ರಶೇಖರಮೂರ್ತಿ, ಚಾಮುಲ್ ನಿರ್ದೇಶಕ ಕಮರವಾಡಿ ರೇವಣ್ಣ, ಮಹದೇವಶೆಟ್ಟಿ, ಕಂದಹಳ್ಳಿ ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯರಿಯೂರು ಪ್ರಕಾಶ್ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net