

ಬೆಳಗಾವಿ: ನಾವು ವಾಸಿಸುವ ಪರಿಸರವೂ ಸೇರಿದಂತೆ ನಾವು ಕೆಲಸ ಮಾಡುವ ಕಚೇರಿಗಳಲ್ಲಿ ಕೂಡ ಸ್ವಚ್ಛತೆ ಕಾಪಾಡುವಲ್ಲಿ ಆದ್ಯತೆ ನಿಡಬೇಕೆಂದು ಜಿಪಂ ಸಿಇಒ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಮಂಗಳವಾರ ರಾಷ್ಟ್ರ ಪಿತ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ನಿಮಿತ್ತ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್ಲರೂ ದೈನಂದಿನ ಜೀವನದಲ್ಲಿ ಸ್ವಚ್ಛತೆಗೆ ಮಹತ್ವ ಕೊಡಬೇಕು. ಸ್ವಚ್ಚತೆಯು ಕೂಡ ದೈನಂದಿನ ಕಾರ್ಯಕಗಳಲ್ಲಿ ಒಂದು ಎಂದು ಭಾವಿಸಿ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಯುತ ಪರಿಸರ ನಿರ್ಮಾಣ ಮಾಡಲು ಎಲ್ಲರೂ ಕೈಜೊಡಿಸಬೇಕೆಂದು ತಿಳಿಸಿದರು.
. ಜಿಪಂ. ಕಾರ್ಯಾದಲ್ಲಿ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ತಮ್ಮ ಶಾಖೆಗಳಲ್ಲಿ ಸ್ವಚ್ಛತೆ ಮಾಡಿ ಕಚೇರಿಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ಸ್ವಚ್ಛತೆ ಮಾಡಲಾಯಿತು.
ಜಿ.ಪಂ. ಯೋಜನಾ ನಿರ್ದೇಶಕ ರವಿ ಎನ್ ಬಂಗಾರೆಪ್ಪನವರ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ, ಸಹಾಯಕ ನಿರ್ದೇಶಕಿ ಜಯಶ್ರೀ ನಂದೇನ್ನವರ, ಶಾಖಾ ವ್ಯವಸ್ಥಾಪಕರು ಹಾಗೂ ಜಿಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.