7 ಕೋಟಿ ರೂ. ಮೌಲ್ಯದ ಅಕ್ಕಿ, ಎಣ್ಣೆ ವಶ

sp g.k.mithunkumar
ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಎಸ್ಪಿಗಳಾದ ಅನಿಲ್‌ಕುಮಾರ್ ಭೂಮರಡ್ಡಿ, ಕಾರಿಯಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
Published on

ಶಿವಮೊಗ್ಗ: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಎರಡು ಗೋಡೌನ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿ 7 ಕೋಟಿ ರೂ. ಮೌಲ್ಯದ ಅಕ್ಕಿ, ಎಣ್ಣೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಹೇಳಿದರು.

ದಾಖಲೆಗಳನ್ನು ಪರಿಶೀಲಿಸಲು ಗೋಡೌನ್‌ಗಳ ಮೇಲೆ ದಾಳಿ ನಡೆಸಿದ್ದು ಒಂದು ಗೋಡೌನ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ವಸ್ತುಗಳು ಹಾಗೂ ಮತ್ತೊಂದರಲ್ಲಿ 2.5 ಕೋಟಿ ರೂ. ಮೌಲ್ತದ ವಸ್ತುಗಳು ಪತ್ತೆಯಾಗಿದ್ದು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದರು.
ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು 26 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದರು. ಎಎಸ್ಪಿಗಳಾದ ಅನಿಲ್‌ಕುಮಾರ್ ಭೂಮರಡ್ಡಿ, ಕಾರಿಯಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net