ಹೆಲ್ಮೆಟ್ ಧರಿಸಿಯೇ ಬೈಕ್ ಚಲಾಯಿಸಿ

17-klg 2a BIKE RALLY
Published on

ಕಲಘಟಗಿ: ಚಾಲನೆ ಸುರಕ್ಷಿತವಾಗಿದ್ದರೆ ಜೀವನ ಸುರಕ್ಷಿತವಾಗಿರುತ್ತದೆ. ಆದ್ದರಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಯೇ ದ್ವಿಚಕ್ರ ವಾಹನ ಚಲಾಯಿಸಬೇಕು ಎಂದು ಸಿಪಿಐ ಶ್ರೀಶೈಲ ಕೌಜಲಗಿ ಹೇಳಿದರು.

ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಪಟ್ಟಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ಯಾವುದೇ ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.

ಸ್ಥಳೀಯ ಠಾಣೆ ಪೊಲೀಸರು ಬೈಕ್ ರ‍್ಯಾಲಿ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಸಾರ್ವಜನಿಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು. ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net