ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

bike accident 1
Published on

ಮೈಸೂರು: ಮೈಸೂರು ತಾಲೂಕಿನ ಗುರುಕಾರಪುರ ಗೇಟ್ ಬಳಿ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಜೆ.ಪಿ.ನಗರ ನಿವಾಸಿ ಎಸ್.ನಾಗಾರ್ಜುನ್(24) ಮೃತರು. ಹಿಂಬದಿ ಸವಾರ ಸಚಿನ್ ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಇಬ್ಬರು ಬೈಕ್‌ನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದರು. ಏ.30ರಂದು ವಾಪಸ್ ಬರುವ ವೇಳೆ ಗುರುಕಾರಪುರ ಗೇಟ್ ಬಳಿ ಬೈಕ್ ನಿಯಂತ್ರಣ ಕಳೆದುಕೊಂಡಿದೆ. ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಇದರಿಂದಾಗಿ ತಲೆಯ ಭಾಗಕ್ಕೆ ಪೆಟ್ಟಾದ ಕಾರಣ ನಾಗಾರ್ಜುನ್ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವರುಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net