ಬೈಕ್​ನಿಂದ ಬಿದ್ದು ಸವಾರ ಸಾವು

Bike Accident_2
Published on

ಶಿಗ್ಗಾಂವಿ: ಬೈಕ್​ನಿಂದ ಬಿದ್ದು ಸವಾರ ಮೃತಪಟ್ಟ ಟನೆ ತಾಲೂಕಿನ ಕಡಹಳ್ಳಿ ಬಳಿ ಗುರುವಾರ ನಡೆದಿದೆ.

ಹಾನಗಲ್ಲ ತಾಲೂಕಿನ ಹರಣಗೇರಿ ಗ್ರಾಮದ ಕುಮಾರ ಬಸಯ್ಯ ಕುಲಕಣಿರ್ (31) ಮೃತ ವ್ಯಕ್ತಿ.

ಈತ ಶಿಗ್ಗಾಂವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಬೈಕ್​ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net