ಸ್ಕೂಟರ್‌ನಿಂದ ಕೆಳಗೆ ಬಿದ್ದು ಸವಾರ ಸಾವು

Published on

ಮೈಸೂರು: ನಿಯಂತ್ರರಣ ತಪ್ಪಿ ಸ್ಕೂಟರ್‌ನಿಂದ ಕೆಳಗೆ ಬಿದ್ದು ಸವಾರ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೊಣನೂರು ಗ್ರಾಮದ ಶ್ರೀನಿವಾಸ್(35)ಮೃತರು. ಜನರೇಟರ್ ವ್ಯಾಪಾರಿಯಾದ ಶ್ರೀನಿವಾಸ್ ಅವರು ಮೈಸೂರಿಗೆ ಬಂದು ವಾಪಸ್ ಊರಿಗೆ ತೆರಳುತ್ತಿದ್ದಾಗ ಮೈಸೂರು ತಾಲೂಕು ಹೊಸಕೋಟೆ ಬಳಿ ಭಾನುವಾರ ರಾತ್ರಿ ರಸ್ತೆಡುಬ್ಬ ಗಮನಿಸದೆ ನಿಯಂತ್ರಣ ತಪ್ಪಿ ಸ್ಕೂಟರ್‌ನಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net