ಬಸ್-ಬೈಕ್ ಡಿಕ್ಕಿಯಾಗಿ ಸವಾರ ಸಾವು

accident-15
Published on

ರೋಣ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಪಟ್ಟಣದ ವಾಕರಸಾ ಸಂಸ್ಥೆಯ ಡಿಪೋ ಬಳಿ ಬುಧವಾರ ನಡೆದಿದೆ.

ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ವಸಂತ ಮಲ್ಲಪ್ಪ ಗುಡಿಸಾಗರ ಮೃತಪಟ್ಟವರು. ವಸಂತ ರೋಣ ಮಾರ್ಗವಾಗಿ ಗದಗ ಕಡೆ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಎದುರಿಗೆ ಬಂದ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ವಸಂತ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದರು. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net