ಬಸ್-ಬೈಕ್ ಡಿಕ್ಕಿಯಾಗಿ ಸವಾರ ಮೃತ್ಯು

accident
ವಾಸುದೇವ ಗಾಣಿಗ
Published on

ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್‌ನಲ್ಲಿ ಶನಿವಾರ ತಡರಾತ್ರಿ ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೋಟತಟ್ಟು ಕಲ್ಮಾಡಿ ರಸ್ತೆ ನಿವಾಸಿ ಪಾತ್ರಿ ಮಂಜುನಾಥ್ ಗಾಣಿಗ ಅವರ ಪುತ್ರ ವಾಸುದೇವ ಗಾಣಿಗ(33) ಮೃತಪಟ್ಟವರು. ಅವರು ರಾತ್ರಿ 12ಕ್ಕೆ ಹೋಟೆಲ್‌ನಲ್ಲಿ ಕೆಲಸ ಮುಗಿಸಿ ಮನೆಗೆ ಹೋಗಲು ಕೋಟ ಸರ್ಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಶಿರಸಿ ಕಡೆ ಹೋಗುವ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net