

ಬೇಲೂರು: ಕೋನೇರ‌್ಲು ಗ್ರಾಮದ ಬಳಿ ಸೋಮವಾರ ತಡರಾತ್ರಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಾಸನ ಸಮೀಪದ ಇಬ್ದಾಣೆ ಗ್ರಾಮದ ಸಂತೋಷ (21) ಮೃತಪಟ್ಟವನು. ಹಾಸನದಿಂದ ಧರ್ಮಸ್ಥಳಕ್ಕೆ ಬೈಕ್‌ನಲ್ಲಿ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಕೋನೇರ‌್ಲು ಗ್ರಾಮದ ಸಮೀಪ ಬೇಲೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದರಿಂದ ಸವಾರ ಸಂತೋಷ್ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಸವಾರ ಹಾಸನದ ದೇವೇಗೌಡ ನಗರದ 20 ವರ್ಷದ ವಿನೋದ್ ಅವರ ಕಾಲು ಮುರಿದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡರೆ, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಪೊಲೀಸ್ ವೃತ್ತ ನಿರೀಕ್ಷಕ ಸಿದ್ದರಾಮೇಶ್ವರ್, ಪಿಎಸ್‌ಐ ಅಜಯ್‌ಕುಮಾರ್, ಎಎಸ್‌ಐ ನಾಗರಾಜು ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.