ಶಾಲೆ ಬಸ್ ಬೈಕ್ ನಡುವೆ ಡಿಕ್ಕಿಯಾಗಿ ಸವಾರ ಬಲಿ

hand-dead-victim-woman-covered-600nw-2193737127
Published on

ಹೆಬ್ರಿ: ಶಾಲೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಣೇಶ್ ಎಂಬುವರು ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಸುದರ್ಶನ್ ಗಾಯಗೊಂಡ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ.

ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಖಾಸಗಿ ಶಾಲೆಯ ಬಸ್ ಎದುರಿನಿಂದ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡ ಸುದರ್ಶನ್ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net