ಸಿದ್ಧಾರೂಢರ ಜಯಂತಿಗೆ ಪ್ರಧಾನಿ ಶುಭಾಷಯ

new Shree Siddharudha swamiji new
Published on

ಹುಬ್ಬಳ್ಳಿ : ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ 188ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಬುಧವಾರ ಬೆಳಗ್ಗೆ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಶುಭಾಶಯ ಕೋರಿರುವ ಪ್ರಧಾನಿ, ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳು ಎಂದು ತಿಳಿಸಿದ್ದಾರೆ.

ಆಧ್ಯಾತ್ಮಿಕ ಪ್ರಬುದ್ಧತೆ, ಸಾಮಾಜಿಕ ಸಾಮರಸ್ಯ ಮತ್ತು ವಂಚಿತರ ಸಬಲೀಕರಣಕ್ಕೆ ನೀಡಿದ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರ ಜೀವನ ಮತ್ತು ಕಾರ್ಯಗಳು ಎಲ್ಲ ಜೀವಿಗಳ ಕಲ್ಯಾಣಕ್ಕೆ ಗಾಢವಾದ ಬದ್ಧತೆಗೆ ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಶ್ರೀ ಸಿದ್ಧಾರೂಢರು ಯಾವಾಗಲೂ ಏಕತೆ ಮತ್ತು ದಯೆಯ ಮಹತ್ವವನ್ನು ಎತ್ತಿ ತೋರಿಸಿದರು. ಅವರ ಆದರ್ಶಗಳನ್ನು ಈಡೇರಿಸಲು ನಾವು ಸದಾ ಶ್ರಮಿಸುತ್ತೇವೆ ಎಂದು ಪ್ರಧಾನಿ ಶುಭಾಷಯದಲ್ಲಿ ಬರೆದಿದ್ದಾರೆ.

ಪ್ರಧಾನಿ ಬರೆದ ಈ ಶುಭಾಷಯ ವೈರಲ್ ಆಗಿದ್ದು, ಸಿದ್ಧಾರೂಢರ ಭಕ್ತರು ಪ್ರಧಾನಿ ಅವರ ಶುಭಾಷಯ ಪತ್ರವನ್ನು ಶೇರ್ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net