ರಿಮ್ಸ್‌ನಲ್ಲಿ ಕರೊನಾ ಪೀಡಿತರಿಗೆ ಪ್ರತ್ಯೇಕ ವಾರ್ಡ್; ವೈದ್ಯರು, ದಾದಿಯರ ನಿಯೋಜನೆ

080220 Raichur Rims corona Virous Seperate Ward
Published on

ರಾಯಚೂರು: ಕರೊನಾ ಸೋಂಕು ಪೀಡಿತರು ಜಿಲ್ಲೆಯಲ್ಲಿ ಪತ್ತೆಯಾಗದಿದ್ದರೂ ಮುಂಜಾಗ್ರತಾ ಕ್ರಮವಾಗಿ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ಶನಿವಾರದಿಂದ ಆರಂಭಿಸಲಾಗಿದೆ.

ರಾಜ್ಯದಲ್ಲಿ ಕರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಜಿಲ್ಲಾವಾರು ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಜತೆಗೆ ಚಿಕಿತ್ಸೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸೂಚನೆ ಬಂದ ಹಿನ್ನೆಲೆ ರಿಮ್ಸ್‌ನಲ್ಲಿ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ.

ವಾರ್ಡ್‌ನಲ್ಲಿ ಐದು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಮೂರು ಶಿಫ್ಟ್‌ಗಳಲ್ಲಿ ವೈದ್ಯರು ಹಾಗೂ ದಾದಿಯರನ್ನು ನಿಯೋಜನೆ ಮಾಡಲಾಗಿದೆ. ಚಿಕಿತ್ಸೆಗಾಗಿ ಬೇಕಾದ ಔಷಧಗಳ ದಾಸ್ತಾನು ಮಾಡಲಾಗಿದೆ. ವಾರ್ಡ್‌ನಲ್ಲಿ ಕಾರ್ಯನಿರ್ವಹಿಸುವವರಿಗೆ ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಲಾಗಿದೆ.

ಜಿಲ್ಲೆಯಲ್ಲಿ ಕರೊನಾ ಸೋಂಕು ಪೀಡಿತರು ಕಂಡು ಬರದಿದ್ದರೂ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಆರಂಭಿಸಲಾಗಿದೆ. ಅಗತ್ಯ ಔಷಧ ದಾಸ್ತಾನು ಮಾಡಲಾಗಿದ್ದು, ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಲಾಗಿದೆ. | ಡಾ.ವಿಜಯಕುಮಾರ ನವಸುಂದಿ, ಜಿಲ್ಲಾ ಶಸ್ತ್ರಚಿಕಿತ್ಸಕ, ರಿಮ್ಸ್ ಆಸ್ಪತ್ರೆ, ರಾಯಚೂರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net