ಸ್ವಚ್ಛ ನೀರಿನಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿ

Untitled design (71)
ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಡೆಂಗಿ ದಿನಾಚರಣೆ ಕಾರ್ಯಕ್ರಮದಲ್ಲಿ ಟಿಎಚ್‌ಒ ಡಾ.ಅಮರೇಶ ಪಾಟೀಲ್ ಮಾತನಾಡಿದರು. ಜಿಲ್ಲಾ ಮಲೇರಿಯಾ ಮೇಲ್ವಿಚಾರಕ ತಾಯಪ್ಪ, ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಷಿ, ಆರೋಗ್ಯ ನಿರೀಕ್ಷಣಾಧಿಕಾರಿ ಬಾಬಣ್ಣ, ವಸೀಂ ರೆಹಮಾನ್, ಕಾಸಿಂ ಅಲಿ, ಶಾಂತಕುಮಾರ, ಶರಣಬಸವ, ಶಿವಕುಮಾರ, ಜಗದೀಶ, ಸಂಗೀತಾ, ಶೃತಿ, ಲಲಿತಾ, ರೇಣುಕಾ, ನಾಗರತ್ನಾ, ಬಸವಲಿಂಗಮ್ಮ, ಯಲ್ಲಮ್ಮ, ಸೀತಾ ಇದ್ದರು.
Published on

ಲಿಂಗಸುಗೂರು: ಡೆಂಘೆ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಅಗತ್ಯ ಎಂದು ಟಿಎಚ್‌ಒ ಡಾ.ಅಮರೇಶ ಪಾಟೀಲ್ ಹೇಳಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಡೆಂಘೆ ದಿನಾಚರಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.

ಡೆಂಘೆ ಜ್ವರವು ವೈರಸ್‌ನಿಂದ ಉಂಟಾಗುವ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಹೀಗಾಗಿ ಮನೆಯ ಸುತ್ತಲು ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಹೇಳಿದರು.

ಮುಖ್ಯ ವೈದ್ಯಾಧಿಕಾರಿ ಖಾಜಾ ಮೋಹಿನುದ್ದಿನ್ ಮಾತನಾಡಿ, ತೀವ್ರ ಜ್ವರ, ತಲೆನೋವು, ಕಣ್ಣುಗಳ ಹಿಂಭಾಗ ನೋವು, ಬಾಯಿ, ಚರ್ಮದ ಮೇಲೆ ರಕ್ತಸ್ರಾವ ಡೆಂಘೆ ಜ್ವರದ ಲಕ್ಷಣಗಳಾಗಿವೆ. ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net