ಜೂ. 3ರಂದು ರಿಷಿಕಾ ಕುಂದೇಶ್ವರಗೆ ಗೌರವ ಸನ್ಮಾನ

rrrrrrrrrrrrrrrrr
Published on



ಮಂಗಳೂರು : ಜೀ ಕನ್ನಡ ಡ್ರಾಮಾ ಜೂನಿಯಸ್ ಚಾಂಪಿಯನ್ ರಿಷಿಕಾ ಕುಂದೇಶ್ವರ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೂ. 3ರಂದು ಬೆಳಗ್ಗೆ 11.30ಕ್ಕೆ ಪತ್ರಿಕಾ ಭವನದಲ್ಲಿ ಗೌರವ ಸನ್ಮಾನ ನಡೆಯಲಿದೆ. ಆಳ್ವಾಸ್ ಶಿಕ್ಷಣ
ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ನಟ -ನಿರ್ದೇಶಕ ದೇವದಾಸ್ ಕಾಪಿಕಾಡ್, ಅಶೋಕ ನಗರ ಎಸ್‌ಡಿಎಂ ಸ್ಕೂಲ್ ಸಂಚಾಲಕಿ ಶೃತಾ ಜಿತೇಶ್, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ.ಹರೀಶ್ ರೈ,
ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net