ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಿತೇಶ್ ಆಯ್ಕೆ

ayke
Published on

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜು ನೆಲ್ಯಾಡಿಯ ವಿಶ್ವವಿದ್ಯಾಲಯ ಪದವಿ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ತೃತೀಯ ವರ್ಷದ ಕಲಾ ವಿಭಾಗದ ವಿದ್ಯಾರ್ಥಿ ರಿತೇಶ್ ಆಯ್ಕೆಯಾದರು. ಕಾರ್ಯದರ್ಶಿಯಾಗಿ ತೃತೀಯ ವರ್ಷದ ಕಲಾ ವಿಭಾಗದ ವಿದ್ಯಾರ್ಥಿನಿ ಕಾವ್ಯ, ಸಹ ಕಾರ್ಯದರ್ಶಿಯಾಗಿ ತೃತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪುನೀತ್ ಕುಮಾರ್, ಲಲಿತ ಕಲಾ ಸಂಘದ ಕಾರ್ಯದರ್ಶಿಯಾಗಿ ತೃತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಭವ್ಯಶ್ರೀ, ಲಲಿತಕಲಾ ಸಂಘದ ಜೊತೆ ಕಾರ್ಯದರ್ಶಿನಿಯಾಗಿ ತೃತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ನುಸ್ರೀಲ್ ಅಜೀಜ್ ಹಾಗೂ ಕ್ರೀಡಾ ಸಹಕಾರ್ಯದರ್ಶಿಯಾಗಿ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಹುಲ್ ಆಯ್ಕೆಯಾದರು.

ವಿದ್ಯಾರ್ಥಿ ಸಂಘದ ಲಲಿತಕಲಾ ಸಂಘದ ಕಾರ್ಯದರ್ಶಿ ಹಾಗೂ ಕ್ರೀಡಾ ಸಹ ಕಾರ್ಯದರ್ಶಿ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಅಧ್ಯಕ್ಷ ಸ್ಥಾನಕ್ಕೆ, ಕಾರ್ಯದರ್ಶಿ, ಸಹ ಕಾರ್ಯದರ್ಶಿ, ಲಲಿತಕಲಾ ಸಂಘದ ಜತೆಕಾರ್ಯದರ್ಶಿ ಸ್ಥಾನಕ್ಕೆ ಚುನಾವಣೆ ನಡೆಯಿತು. ವಿದ್ಯಾರ್ಥಿ ಸಂಘದ ಸಂಚಾಲಕ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ನೂರಂದಪ್ಪ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net