ಬೆಳಗಾವಿಯಲ್ಲಿ ವಕ್ಫ್ ವಿರುದ್ಧ ಜನಜಾಗೃತಿ ಹೋರಾಟ: ಶಾಸಕ ರಮೇಶ  ಜಾರಕಿಹೊಳಿ ಮಾಹಿತಿ

IMG-20241129-WA0013.jpg
Published on

-

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ರಾಜ್ಯದಲ್ಲಿ ವಕ್ಫ್ ಮಂಡಳಿ ಭೂ ಕಬಳಿಕೆ ವಿರೋಧಿಸಿ ಡಿಸೆಂಬರ್ 1ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಕ್ಫ್ ಮಂಡಳಿ ಭೂ ಕಬಳಿಕೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿದ್ದು, ಇದೀಗ ಬೆಳಗಾವಿಯಲ್ಲಿ ಹೋರಾಟ ನಡೆಸಲಾಗುತ್ತಿದೆ. ಎಲ್ಲ ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು, ರೈತರು, ಅನ್ಯಾಯಕ್ಕೆ ಒಳಗಾದವರು ಭಾಗವಹಿಸಲಿದ್ದಾರೆ ಎಂದರು.

ನಗರದ ಗಾಂಧಿಭವನದಲ್ಲಿ ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ವಕ್ಫ್ ಭೂ ಕಬಳಿಕೆ ವಿರೋಧಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಹಾಗಾಗಿ ಸಾವಿರಾರು ಸಂಖ್ಯೆಯಲ್ಲಿ ಸೇರುವ ಮೂಲಕ ಬೆಳಗಾವಿಯ ಹೋರಾಟ ಯಶಸ್ವಿಗೊಳಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಿಕೊಂಡರು

ಬೆಳಗಾವಿ ನಗರದಲ್ಲಿ ನಡೆಯುವತ್ತಿರುವ ಬೃಹತ್ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಂಸದ ಪ್ರತಾಪ ಸಿಂಹ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಶಾಸಕ ಕುಮಾರ ಬಂಗಾರಪ್ಪ, ಬಿ.ಪಿ.ಹರೀಶ, ಎನ್.ಆರ್.ಸಂತೋಷ್ ಸೇರಿ ಬಿಜೆಪಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಬೆಳಗಾವಿ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರು ಕರೆತರುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಮುಖಂಡ ಕಿರಣ ಜಾಧವ, ಮುರುಘೇಂದ್ರಗೌಡ ಪಾಟೀಲ ಇತರರಿದ್ದರು.

ಬೆಳಗಾವಿಯಲ್ಲಿ ವಕ್ಫ್ ವಿರುದ್ಧ ಜನಜಾಗೃತಿ ಹೋರಾಟ

-ಶಾಸಕ ರಮೇಶ ಜಾರಕಿಹೊಳಿ ಮಾಹಿತಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net