

ಕುಶಾಲನಗರ:
ಕೊಡಗು ಜಿಲ್ಲಾ ಪೊಲೀಸ್, ಸೋಮವಾರಪೇಟೆ ಉಪ ವಿಭಾಗ, ಕುಶಾಲನಗರ ಸಂಚಾರ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ -2025 ಕಾರ್ಯಕ್ರಮಕ್ಕೆ ಪೊಲೀಸ್ ಡಿವೈಎಸ್ಪಿ ಗಂಗಾಧರಪ್ಪ ಶನಿವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಹೆಲ್ಮೆಟ್ ಇಲ್ಲದೆ ಚಾಲನೆ ಮಾಡುತ್ತಿರುವ ದ್ವಿಚಕ್ರ ವಾಹನ ಚಾಲಕನೊಬ್ಬನಿಗೆ ಹೆಲ್ಮೆಟ್ ಪ್ರಾಮುಖ್ಯತೆಯ ಬಗ್ಗೆ ತಿಳಿಸುವುದಲ್ಲದೆ ಉಚಿತವಾಗಿ ಹೆಲ್ಮೆಟ್ ನೀಡಿದರು.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಹೆಲ್ಮೆಟ್ ತಮ್ಮ ಜೀವನ ರಕ್ಷಣೆ ಮಾಡುವಲ್ಲಿ ಅದರ ಉಪಯುಕ್ತತೆ ಬಗ್ಗೆ ದ್ವಿಚಕ್ರ ವಾಹನ ಚಾಲಕರನ್ನು ಉದ್ದೇಶಿಸಿ ಮಾಹಿತಿ ನೀಡಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಜಾಗೃತಿ ಮೂಡಿಸುವ ಭಿತ್ತಿಪತ್ರ ಹಿಡಿದು ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ಪ್ರಕಾಶ್, ಸಂಚಾರಿ ಠಾಣೆಯ ಅಧಿಕಾರಿ ಗಣೇಶ್, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್, ಶಾಲೆ ಕಾಲೇಜುಗಳ ಶಿಕ್ಷಕರು, ವಿವಿಧ ಶಾಲೆಗಳ ಸ್ಕೌಟ್ ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಸಪ್ತಾಹದ ಜಾಥಾದಲ್ಲಿ ಇದ್ದರು.