

ಸುಬ್ರಹ್ಮಣ್ಯ: ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.