

ಹಗರಿಬೊಮ್ಮನಹಳ್ಳಿ: ತಾಲೂಕಿನ ಸಕ್ರಿಹಳ್ಳಿ ರಸ್ತೆಯಲ್ಲಿ ಬುಧವಾರ ಸಂಜೆ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಒಬ್ಬ ಸವಾರ ಮೃತಪಟ್ಟಿದ್ದು, ಇನ್ನೊಬ್ಬ ತೀವ್ರ ಗಾಯಗೊಂಡಿದ್ದಾನೆ.
ಸಕ್ರಿಹಳ್ಳಿ ಗ್ರಾಮದ ಎಚ್.ಬಸವರಾಜ್ (42) ಮೃತ. ಮೋರಿಗೇರಿ ಗ್ರಾಮದ ಉದಯ (26)ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದಿಂದ ಸಕ್ರಿಹಳ್ಳಿ ಕಡೆಗೆ ಬಸವರಾಜ್ ಹಾಗೂ ಮೋರಿಗೇರಿಯಿಂದ ಉದಯ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಬಸವರಾಜ ಚಿಕಿತ್ಸೆ ಫಲಿಸದೆ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.