

ಮೈಸೂರು: ವಿಜಯನಗರದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ವಿಜಯನಗರ ಒಂದನೇ ಹಂತದ ನಿವಾಸಿ ರಾಜಶೇಖರಪ್ಪ(74) ಮೃತ ದುರ್ದೈವಿ. ವಿಜಯನಗರ ಮುಖ್ಯ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.