ಮೈಸೂರಿನಲ್ಲಿ ರಸ್ತೆ ಅಪಘಾತ; ಇಬ್ಬರು ಪೇದೆಗಳು ಮೃತ್ಯು

bike accident 1
Published on

ಮೈಸೂರು: ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಮೃತಪಟ್ಟಿದ್ದಾರೆ.

ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬಟಾಲಿಯನ್ ಪೇದೆಗಳಾದ ಕುಂಬಾರಕೊಪ್ಪಲು ಬಡಾವಣೆ ನಿವಾಸಿ ಪಿ.ಮಹೇಶ್ (23) ಹಾಗೂ ವಿಜಯಪುರ ಜಿಲ್ಲೆಯ ಜಮಖಂಡಿ ತಾಲೂಕಿನ ಅಮರನಾಥ ತಾಳಿಕೋಟೆ (24) ಮೃತರು.

ಸಿದ್ದಾರ್ಥ ಬಡಾವಣೆ ಬಳಿಯ ರಸ್ತೆಬದಿಯಲ್ಲಿ ಊಟ ಸೇವಿಸಿ ಬೈಕಿನಲ್ಲಿ ಕೆಎಸ್‌ಆರ್‌ಪಿ ಬೆಟಾಲಿಯನ್ ಕೇಂದ್ರದತ್ತ ತೆರಳುತ್ತಿದ್ದ ಸಂದರ್ಭ ಎದುರುಗಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಕೊನೆಯುಸಿರೆಳೆದರು. ಘಟನೆ ನಂತರ ಕಾರು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಸಂದರ್ಭ ಸಾರ್ವಜನಿಕರು ಕಾರನ್ನು ಬೆನ್ನತ್ತಿ ಆಲನಹಳ್ಳಿ ವರ್ತುಲ ರಸ್ತೆ ಬಳಿ ಅಡ್ಡಗಟ್ಟಿ ಕರೆ ತಂದರು. ಸಿದ್ದಾರ್ಥನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net