ಮೈಸೂರಿನಲ್ಲಿ ರಸ್ತೆ ಅಪಘಾತ : ಇಬ್ಬರು ವಿದ್ಯಾರ್ಥಿಗಳು ಸಾವು

acident feb 23 2020
Published on

ಮೈಸೂರು: ನಗರದ ಮಾನಸಗಂಗೋತ್ರಿಯ ಚದುರಂಗ ರಸ್ತೆಯ ಆಯಿಷ್ ಬಳಿಯಲ್ಲಿ ಭಾನುವಾರ ಕಾರು, ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ, ಸಿದ್ದಾರ್ಥನಗರ ಬಡಾವಣೆ ನಿವಾಸಿ ಉಲ್ಲಾಸ್ ಮತ್ತು ಕೇರಳ ಮೂಲದ ಶಿವಾನಿ ಮೃತಪಟ್ಟ ವರು. ಬೈಕ್ ಸವಾರ ಮಹದೇವಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಲ್ಲಾಸ್ ಅವರು ಸ್ನೇಹಿತೆ ಶಿವಾನಿಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಕಾರು ನಿಯಂತ್ರಣಕ್ಕೆ ಬಾರದೆ ಮಹದೇವಸ್ವಾಮಿ ಬೈಕಿಗೂ ಡಿಕ್ಕಿ ಹೊಡೆದಿದೆ. ವಿವಿಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಗೆ ಯತ್ನ: ಪತ್ನಿಯ ಬಗ್ಗೆ ಅನುಮಾನ ಹೊಂದಿದ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೆ ಯತ್ನಿಸಿದ್ದಾನೆ. ಮಂಜುನಾಥ ಪುರದ ನಿವಾಸಿ ಕೃಷ್ಣ ಎಂಬಾತನೇ ಪತ್ನಿ ಸುಮಾ ಅವರ ಹತ್ಯೆಗೆ ಯತ್ನಿಸಿದ ಆರೋಪಿ. ಗಾಯಗೊಂಡಿರುವ ಸುಮಾ ಅವರನ್ನು ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆರೋಪಿ ಕೃಷ್ಣ ತಲೆಮರೆಸಿಕೊಂಡಿದ್ದಾನೆ. ಪತ್ನಿಯ ಬಗ್ಗೆ ಅನುಮಾನ ಹೊಂದಿದ್ದ ಈತ ಈ ಹಿಂದೆ ಅಕೆಯ ಮೇಲೆ ಹಲ್ಲೆ ನಡೆಸಿ ಜೈಲು ಶಿಕ್ಷೆಯನ್ನು ಸಹ ಎದುರಿಸಿದ್ದ. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net