ಮೈಸೂರಿನಲ್ಲಿ ರಸ್ತೆ ಅಪಘಾತ : ವಾರಣಾಸಿ ನಿವಾಸಿ ನಿಧನ

acident
accident
Published on

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದ ಸಂದರ್ಭ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಮೂಲತಃ ಉತ್ತರಪ್ರದೇಶದ ವಾರಣಾಸಿಯ ಮಹೇಶ್ ಗುಪ್ತ(45) ಮೃತ ಪಾದಚಾರಿ. ಮಹೇಶ್ ಗುಪ್ತ ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ 8.30ಕ್ಕೆ ಸಿದ್ದಲಿಂಗಪುರ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭ ಶ್ರೀರಂಗಪಟ್ಟಣ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆಯಿತು. ಎನ್.ಆರ್.ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net