ಮೈಸೂರಿನಲ್ಲಿ ರಸ್ತೆ ಅಪಘಾತ: ಯುವಕ ಸಾವು

ACCIDENT
Published on

ಮೈಸೂರು: ಕೆಎಸ್‌ಅರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಬುಧವಾರ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ನಿವಾಸಿ ಸೈಯದ್ ಎಸ್ ನ್ಯೂಮಾನ್(26) ಮೃತ ದುರ್ದೈವಿ. ಇವರು ಖಾಸಗಿ ಕಂಪನಿಯೊಂದರಲ್ಲಿ ಮೆಡಿಕಲ್ ರೆಪ್ರೆಸೆಂಟಿಟೀವ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸದ ನಿಮಿತ್ತ ಬೈಕ್‌ನಲ್ಲಿ ನಂಜನಗೂಡಿಗೆ ತೆರಳುತ್ತಿದ್ದರು. ಈ ಸಂದರ್ಭ ಮೈಸೂರು-ನಂಜನಗೂಡು ಹೆದ್ದಾರಿಯ ಗುಂಡೂರಾವ್ ನಗರದ ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ನ್ಯೂಮನ್ ಸ್ಥಳದಲ್ಲಿಯೇ ಮೃತಪಟ್ಟರು. ಕೆ.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net