ಭೀಕರ ರಸ್ತೆ ಅಪಘಾತ; ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿ ಸಾವು

1218530
Published on

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ, ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ (6) ಸಾವನ್ನಪ್ಪಿರುವ ಘಟನೆ ನಗರದ ಕೋಣನಕುಂಟೆ ಬಳಿ ನಡೆದಿದೆ.

ನಗರದ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತಾಯಿಯೊಂದಿಗೆ ತೆರಳ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕಿರುತೆರೆ ಕಲಾವಿದೆ, ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್​​ಗೆ ರವಾನೆ ಮಾಡಿದ್ದು, ಟಿಪ್ಪರ್ ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನನ್ನಮ್ಮ ಸೂಪರ್ ಸ್ಟಾರ್’ ಸ್ಪರ್ಧಿ:
ಕಲರ್ಸ್​ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ಆರಂಭಗೊಂಡಿದ್ದ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಕಾರ್ಯಕ್ರಮಕ್ಕೆ 6 ವರ್ಷದ ಸಮನ್ವಿ ಸ್ಪರ್ಧಿಯಾಗಿದ್ದಳು. ಅಲ್ಲದೇ ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಸಮನ್ವಿ. ತಾಯಿ ಅಮೃತಾ ಜತೆ ಇಂದು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net