ರಸ್ತೆ ಅಪಘಾತ; ವೈದ್ಯಕೀಯ ವಿದ್ಯಾರ್ಥಿ ಸಾವು

Accident
Published on

ಬೆಳಗಾವಿ: ತಾಲೂಕಿನ ಕಾಕತಿ ಸಮೀಪದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟಿದ್ದು, ಮೂವರು ತೀವ್ರ ಗಾಯಗೊಂಡಿದ್ದಾರೆ.

ಪಂಜಾಬ್ ಮೂಲದ ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ರೆಪ್ರೀಸ್ ಸಿಂಗ್ (29) ಮೃತ ವ್ಯಕ್ತಿ. ರಾತ್ರಿ ಊಟಕ್ಕೆಂದು ನಾಲ್ವರು ವಿದ್ಯಾರ್ಥಿಗಳು ಕಾರಿನಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ವಾಹನದಲ್ಲಿದ್ದ ನಾಲ್ವರ ಪೈಕಿ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನುಳಿದವರು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net