ರಸ್ತೆ ಅಪಘಾತದಲ್ಲಿ ಪೊಲೀಸ್ ಪೇದೆ ಸಾವು

Accident
Published on

ಬೆಳಗಾವಿ: ತಾಲೂಕಿನ ಕಾಕತಿ ಗ್ರಾಮದ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಕೆಎಸ್‌ಆರ್‌ಪಿ ಪೇದೆ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಹಿಂಬದಿ ಸವಾರ ತೀವ್ರ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಹಾಲಪ್ಪ ಯಲ್ಲಪ್ಪ ಚಂಡಕಿ (47) ಮೃತಪಟ್ಟ ಪೊಲೀಸ್ ಪೇದೆ. ಹಿಂಬದಿ ಸವಾರ ರಾಯಪ್ಪ ದತ್ತು ಪಾಟೀಲ (49) ಗಂಭೀರವಾಗಿ ಗಾಯಗೊಂಡಿದ್ದಾರೆ. ಭೂತರಾಮನಹಟ್ಟಿ ಗ್ರಾಮದಿಂದ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಮೃತ ಪೇದೆ ಕರ್ತವ್ಯಕ್ಕೆ ಹಾಜರಾಲು ಬೈಕ್ ಮೇಲೆ ಮಚ್ಚೆಗೆ ತೆರಳುತ್ತಿದ್ದರು.

ಈ ವೇಳೆ ಕಾಕತಿ ಗ್ರಾಮದ ಸಮೀಪ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಕಾರ್ ಚಾಲಕ ಶಿವರಾಜ ಪಾಟೀಲ (33) ಎಂಬುವರನ್ನು ಬಂಧಿಸಲಾಗಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net