ರಸ್ತೆ ಅಪಘಾತ ಮೂವರಿಗೆ ಗಾಯ

23Khanapur1-Web
Published on

ಖಾನಾಪುರ: ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ಬೆಳಗಾವಿ-ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಸಮೀಪದ ಮಚ್ಛೆ ನಿವಾಸಿಗಳಾದ ಬಾಬು ಹುಣಶಿಕಟ್ಟಿ (50), ಅವರ ಪತ್ನಿ ಸುಜಾತಾ (47) ಮತ್ತು ಪುತ್ರ ಅಕ್ಷಯ (22) ಗಾಯಾಳುಗಳು ಎಂದು ಗುರುತಿಸಲಾದೆ. ಇವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಚ್ಛೆಯ ಬಸರಿಕಟ್ಟಿ ಕುಟುಂಬದವರು ಕಾರಿನಲ್ಲಿ ನಂದಗಡ ಗ್ರಾಮದ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದರು. ಹೆಬ್ಬಾಳ ಬಳಿ ಎದುರಿನಿಂದ ವೇಗವಾಗಿ ಬಂದ ಲಾರಿ, ಕಾರಿಗೆ ಗುದ್ದಿದ್ದರಿಂದ ಕಾರಿನಲ್ಲಿದ್ದ ಮೂವರೂ ಗಂಭೀರವಾಗಿ ಗಾಯಗೊಂಡರು. ಈ ವೇಳೆ ಅದೇ ಮಾರ್ಗದಲ್ಲಿ ಹೊರಟಿದ್ದ ಮಾಜಿ ಶಾಸಕ ಅರವಿಂದ ಪಾಟೀಲ ಸ್ಥಳೀಯರ ನೆರವಿನೊಂದಿಗೆ ಕಾರಿನಲ್ಲಿ ಸಿಕ್ಕಿಕೊಂಡಿದ್ದ ಮೂವರನ್ನು ರಕ್ಷಿಸಿ ಖಾನಾಪುರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲು ನೆರವಾದರು. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net