

ರಾಯಚೂರು: ಖಾಸಗಿ ಸಂಸ್ಥೆ ಬಸ್‌ಗೆ ಇನ್ನೋವಾ ಕಾರ್ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟು ಐವರು ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಕಸ್ಬೆ ಕ್ಯಾಂಪ್ ಹತ್ತಿರದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಜರುಗಿದೆ.
ಮೃತಪಟ್ಟವರನ್ನು ರಾಯಚೂರು ನಗರ ಮರಿಯಾ ಗೀತಾ (38) ಹಾಗೂ ಅಮಲಾ ಪಾಲ್ ಮೇರಿ (64) ಎಂದು ಗುರುತಿಸಲಾಗಿದೆ. ಹೈದರಾಬಾದ್‌ನಿಂದ ಸಿಂಧನೂರು ಕಡೆ ಹೊರಟಿದ್ದ ಖಾಸಗಿ ಬಸ್‌ಗೆ ಗದಗನಿಂದ ರಾಯಚೂರಿಗೆ ಬರುತ್ತಿದ್ದ ಕಾರ್ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.