

ತುರುವೇಕೆರೆ: ತಾಲೂಕಿನ ಕೊಡಗೀಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಯವರು ವಾಸಿಸುತ್ತಿರುವ ಕಾಲನಿಯಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿಮಾರ್ಣ ಮಾಡಲು ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.
ಭೂ ಸೇನಾ ಅಭಿವೃದ್ಧಿ ನಿಗಮದಲ್ಲಿ ಕೊಡಗೀಹಳ್ಳಿಯ ಎಸ್ಸಿ ಕಾಲನಿ ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಈ ಹಿನ್ನಲೆಯಲ್ಲಿ ಮೊದಲ ಹಂತದ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಪ.ಜಾತಿ ಮತ್ತು ಪ.ಪಂಗಡದ ಎಲ್ಲ ಕಾಲನಿಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಸೂಚಿಸಿದರು.
ಮುಖಂಡರಾದ ಪಾಲಣ್ಣ, ಹೊನ್ನಪ್ಪ, ಕಣತೂರು ರವಿಕುಮಾರ್, ಹಾವಾಳ ಕೃಷ್ಣ, ಬೂವನಹಳ್ಳಿ ಪುನಿತ್, ತೊರೆಮಾವಿನಹಳ್ಳಿ ರಾಮಕೃಷ್ಣ, ಮೊರಸರಕೊಟ್ಟಿಗೆ ಕಾಂತರಾಜು, ಮಲ್ಲಾಘಟ್ಟ ಆನಂದ್ ಇದ್ದರು.