

ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ಕೊಳತೂರು ಗ್ರಾಮ ಸಮೀಪದ ಬಡಾವಣೆ ಮಧ್ಯದಲ್ಲಿ ಬೆಂಗಳೂರು -ಚೆನ್ನೈ ಗ್ರೀನ್ ಕಾರಿಡಾರ್ ನಿರ್ಮಿಸಿ ರಸ್ತೆ ಸಂಪರ್ಕ ಕಡಿತ ಮಾಡಿರುವ ಯೋಜನಾ ಪ್ರಾಧಿಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ನಡೆಯನ್ನು ಖಂಡಿಸಿ ಬಡಾವಣೆಯ ನಿವಾಸಿಗಳು ಭಾನುವಾರ ಪ್ರತಿಭಟನೆ ನಡೆಸಿದರು.
2015ರಲ್ಲಿ ಹೆದ್ದಾರಿ ಪ್ರಾಧಿಕಾರ ಬಡಾವಣೆ ಮಧ್ಯದಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಲ್ಲದೆ, ನಿವೇಶನ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಿತ್ತು. ಆದರೆ, ರಸ್ತೆ ಮತ್ತೊಂದು ಬದಿಯ ನಿವೇಶನದಾರರ ಜಮೀನು ವಶಪಡಿಸಿಕೊಳ್ಳುವಾಗ ಪರ್ಯಾಯ ರಸ್ತೆ ಮಾರ್ಗ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿತ್ತು. ಆದರೆ, ಈಗ ಕಾರಿಡಾರ್ ಪಕ್ಕದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ. ಇದರಿಂದ ರಸ್ತೆ ಸಂಪರ್ಕ ಇಲ್ಲದಂತಾಗಿದೆ ಎಂದು ಹಲವರು ಅಲವತ್ತುಕೊಂಡರು.
ಹೆದ್ದಾರಿ ಪ್ರಾಧಿಕಾರದವರು ರಸ್ತೆ ಸಂಪರ್ಕ ಬಂದ್ ಮಾಡಿರುವ ಬಗ್ಗೆ ಸ್ಥಳೀಯ ಶಾಸಕ, ಸಂಸದ ಹಾಗೂ ಕೇಂದ್ರ ಹೆದ್ದಾರಿ ಮಂತ್ರಿಯವರಿಗೂ ಮನವಿ ಸಲ್ಲಿಸಲಾಗಿದೆ. ಜತೆಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರಕ್ಕೂ ಮನವಿ ಸಲ್ಲಿಸಲಾಗಿದೆ. ಜತೆಗೆ, ಪರ್ಯಾಯ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಒತ್ತಾಯಿಸಿ ಹೈಕೋರ್ಟ್‌ಗೆ ದೂರು ಸಲ್ಲಿಸಲಾಗುವುದು ಎಂದು ಬಡಾವಣೆ ನಿವಾಸಿಗಳ ಸಂಘದ ಅಧ್ಯಕ್ಷ ಹನುಮಂತೇಗೌಡ ತಿಳಿಸಿದರು.
ಹೆದ್ದಾರಿ ಪ್ರಾಧಿಕಾರದವರು ರಸ್ತೆ ಸಂಪರ್ಕ ಬಂದ್ ಮಾಡಿರುವ ಬಗ್ಗೆ ಸ್ಥಳೀಯ ಶಾಸಕ, ಸಂಸದ ಹಾಗೂ ಕೇಂದ್ರ ಹೆದ್ದಾರಿ ಮಂತ್ರಿಯವರಿಗೂ ಮನವಿ ಸಲ್ಲಿಸಲಾಗಿದೆ. ಜತೆಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರಕ್ಕೂ ಮನವಿ ಸಲ್ಲಿಸಿದ್ದು, ರಸ್ತೆ ಇಲ್ಲದಿರುವ 75 ನಿವೇಶನದಾರರಿಗೆ ಪರ್ಯಾಯ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಒತ್ತಾಯಿಸಿ ಹೈಕೋರ್ಟ್‌ಗೆ ದೂರು ಸಲ್ಲಿಸಲಾಗುವುದು. -ಹನುಮಂತೇಗೌಡ, ಬಡಾವಣೆ ನಿವಾಸಿಗಳ ಸಂಘದ ಅಧ್ಯಕ್ಷ ಹೊಸಕೋಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷನಾಗಿ ಸುಮಾರು ಒಂದು ವರ್ಷವಾಗಿದ್ದರೂ ಈ ಪ್ರಕರಣದ ಬಗ್ಗೆ ಯಾವುದೇ ದೂರು ಬಂದಿಲ್ಲ. ಈ ಬಗ್ಗೆ ಸೂಕ್ತ ದಾಖಲೆ ನೀಡಿದಲ್ಲಿ ಸಮಸ್ಯೆ ಪರಿಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದು. -ಕೇಶವ್‌ಮೂರ್ತಿ, ಅಧ್ಯಕ್ಷರು, ಹೊಸಕೋಟೆ ಯೋಜನಾ ಪ್ರಾಧಿಕಾರ