ಹಾನಗಲ್ಲು ಗ್ರಾಮದಲ್ಲಿ ಬರೆ ಕುಸಿತ

05SPT5
ಸೋಮವಾರಪೇಟೆಯಿಂದ ಮಡಿಕೇರಿಗೆ ತೆರಳುವ ಹೆದ್ದಾರಿಯ ಕುಂಬೂರು ಗ್ರಾಮದ ರಸ್ತೆ ಮೇಲೆ ಮರ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸುವ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
Published on

ಸೋಮವಾರಪೇಟೆ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಶನಿವಾರವೂ ಮುಂದುವರಿಯಿತು.

ಹಾನಗಲ್ಲು ಗ್ರಾಮದ ಲೋಹಿತ್ ಮನೆಗೆ ಹಾನಿಯಾಗಿದೆ. ಜೋಸೆಫ್ ಮನೆ ಎದರು ಬರೆ ಕುಸಿದಿದೆ. ಶುಕ್ರವಾರ ಬೆಳಗ್ಗೆ ಮಡಿಕೇರಿ- ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಕುಂಬೂರು ಗ್ರಾಮದ ರಸ್ತೆಗೆ ಮರ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸುವ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net