

ಬೆಳಗಾವಿ: ತಾಲೂಕಿನ ಹೊನ್ನಿಹಾಳ ಗ್ರಾಮದ ವಿಠ್ಠಲ ಬೀರದೇವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿ, ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿಶೇಷ ಪ್ರಯತ್ನದಿಂದ ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣಕ್ಕಾಗಿ ಹಣ ಮಂಜೂರು ಆಗಿದೆ. ಅವರ ಮಾರ್ಗದರ್ಶನ ಹಾಗೂ ಸಲಹೆ, ಸೂಚನೆಗಳ ಮೇರೆಗೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ ತಿಂಗಳು ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬೇಕಾಗಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳೋಣ ಎಂದರು. ಸುರೇಖಾ ಕಟಬುಗೋಳ, ಪ್ರಕಾಶ ಕಡ್ಯಾಗೋಳ, ಶಿವಾನಂದ ಮಠದ, ಸುರೇಶ ಕಟಬುಗೋಳ, ರಾಜು ತಳವಾರ, ಶಿವನಪ್ಪ ಕೆಂಗೇರಿ, ಗಣಪು ಸುಳಗೇಕರ, ರವಿ ಮಠದ, ಕೃಷ್ಣ ಜಾಧವ, ಪಿಡಿಒ ಪ್ರಶಾಂತ ಮುನವಳ್ಳಿ, ದಾದಾಫೀರ್ ನದ್ಾ ಇತರರಿದ್ದರು.