ರಸ್ತೆ ನಿರ್ಮಾಣಕ್ಕೆ ನಿರ್ಲಕ್ಷ ಸಲ್ಲ

Sindhanour Manavi
Published on

ಸಿಂಧನೂರು: ತುರ್ವಿಹಾಳದ 11ನೇ ವಾರ್ಡ್‌ನಲ್ಲಿ ಪ್ರಮುಖ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಿಸಬೇಕೆಂದು ಸಾರ್ವಜನಿಕರು ಸೋಮವಾರ ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಪ್ರಸನ್ನ ಎ.ಕಲ್ಯಾಣಶೆಟ್ಟಿಗೆ ಸೋಮವಾರ ಮನವಿ ಸಲ್ಲಿಸಿದರು.

11ನೇ ವಾರ್ಡ್‌ನಲ್ಲಿ ಸರ್ವೆ ನಂ.329ರ 5.35 ಎಕರೆ ಜಮೀನು ಎನ್‌ಎ ಆಗಿದ್ದು, ವಸತಿ ವಿನ್ಯಾಸದ ಪ್ರಕಾರ ಜನರು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಸರ್ಕಾರದಿಂದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗಿದ್ದರೂ, ಪ್ರಮುಖ ರಸ್ತೆಗೆ ಸಂಪರ್ಕಿಸುವ ರಸ್ತೆ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚರಂಡಿಯಲ್ಲಿನ ತ್ಯಾಜ್ಯ ಹರಿಯಲು ಅವಕಾಶ ಇಲ್ಲದೆ ಪರಿಸರ ಕಲುಷಿತಗೊಂಡಿದ್ದು, ಮಕ್ಕಳು ಅನಾರೋಗ್ಯ ಭೀತಿ ಎದುರಿಸುವಂತಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೂಡಲೇ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net