ರಸ್ತೆ ದಾಟುತ್ತಿದ್ದ ಮಹಿಳೆ ಕಾರು ಡಿಕ್ಕಿಯಾಗಿ ಸಾವು

Crime Logo
Published on

ರಾಣೆಬೆನ್ನೂರ: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ತಾಲೂಕಿನ ಚಳಗೇರಿ ಗ್ರಾಮದ ಬಳಿ ಗುರುವಾರ ನಡೆದಿದೆ.
ಗ್ರಾಮದ ದುರುಗಮ್ಮ ಬಸಪ್ಪ ಹೊನ್ನಕ್ಕಳವರ (52) ಮೃತ ಮಹಿಳೆ.
ಇವರು ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ಸಮಯದಲ್ಲಿ ಏಕಾಏಕಿ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net