ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಚಾಲನೆ

04-FEB-GPT-4
ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಅರಳಿಕಟ್ಟೆ ನಿರ್ಮಾಣ ಕಾಮಗಾರಿಗೆ ಎಚ್.ಎಂ.ಗಣೇಶ್ ಪ್ರಸಾದ್ ಚಾಲನೆ ನೀಡಿದರು. ಎಚ್.ಎನ್.ಬಸವರಾಜು, ಮಹೇಂದ್ರ, ಕುಮಾರಸ್ವಾಮಿ, ಮಂಜುನಾಥ್, ಎಚ್.ಜಿ.ಉಮಾಪತಿ, ಬೆಳ್ಳಿ ಬಸವಣ್ಣ ಸೇರಿದಂತೆ ಹಲವರು ಇದ್ದರು.
Published on

ಗುಂಡ್ಲುಪೇಟೆ: ತಾಲೂಕಿನ ಗ್ರಾಮಾಂತರ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಗೊಳಿಸುವ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ತಾಲೂಕಿನ ಹುಂಡೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡಹಳ್ಳಿ ಗ್ರಾಮದಲ್ಲಿ 4 ಲಕ್ಷ ರೂ. ವೆಚ್ಚದಲ್ಲಿ ಅರಳಿಕಟ್ಟೆ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕ್ಷೇತ್ರದ ಗ್ರಾಮಾಂತರ ಪ್ರದೇಶಗಳ ಅವಶ್ಯಕತೆಗಳ ಬಗ್ಗೆ ಅರಿವಿದ್ದು ರಸ್ತೆ, ಸಮುದಾಯ ಭವನ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸದ್ಯ ಹದಗೆಟ್ಟಿರುವ ರಸ್ತೆಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಗ್ರಾಮ ಪಂಚಾಯಿತಿ ಸದಸ್ಯ ಎಚ್.ಪಿ.ಮಹೇಂದ್ರ, ಪಿಡಿಒ ಕುಮಾರಸ್ವಾಮಿ, ಪ್ರೌಢಶಾಲೆಯ ಮುಖ್ಯಶಿಕ್ಷಕ ಮಂಜುನಾಥ್, ಮುಖಂಡರಾದ ಎಚ್.ಜಿ.ಉಮಾಪತಿ, ಬೆಳ್ಳಿ ಬಸವಣ್ಣ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net