ರಸ್ತೆ ಡಿವೈಡರ್​ಗೆ ಬೈಕ್​ ಡಿಕ್ಕಿ ಸವಾರ ಸಾವು

Bike Accident_2
Published on

ಹಾನಗಲ್ಲ: ರಸ್ತೆಯ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಪಟ್ಟಣದ ಮದರಸಾ ರಸ್ತೆಯಲ್ಲಿ ನಡೆದಿದೆ.

ಪಟ್ಟಣದ ನವನಗರದ ನಿಖಿಲ ಬಸವರಾಜ ಮರಾಠಿ (21) ಮೃತ ಯುವಕ.

ಈತ ರಸ್ತೆಯಲ್ಲಿ ತೆರಳುತ್ತಿದ್ದ ಸಮಯದಲ್ಲಿ ಬೈಕ್​ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ನಿಖಿಲನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net