ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಸವಾರ ಸಾವು

Crime Logo
Published on

ರಾಣೆಬೆನ್ನೂರ: ರಸ್ತೆಯ ಡಿವೈಡರ್​ಗೆ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಚಳಗೇರಿ ಗ್ರಾಮದ ಬಳಿ ಎನ್​ಎಚ್​-48ರಲ್ಲಿ ಸೋಮವಾರ ನಡೆದಿದೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗುಮ್ಮಗೋಳ ಗ್ರಾಮದ ರವಿಚಂದ್ರ ಯಲ್ಲಪ್ಪ ಬೆಂಡಿಕಾಯಿ (31) ಮೃತ ದುರ್ದೈವಿ.

ಈತ ಬೈಕ್​ ಮೇಲೆ ರಾಣೆಬೆನ್ನೂರ ಕಡೆಯಿಂದ ಹರಿಹರ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net